Tuesday, 22 January 2019

ಕಂಬಳದ ಹಿನ್ನಲೆ

ಕಂಬಳದ ಹಿನ್ನಲೆ


ತುಳುನಾಡಿನಲ್ಲಿ ಕಂಬಳದ ಆಚರಣೆ ಸುಮಾರು 800-900 ವರುಶಗಳ ಹಿಂದಿನಿಂದಲೇ ನಡೆದುಕೊಂಡು ಬಂದಿದೆ. #ಉಡುಪಿ ತಾಲೂಕಿನ ಕೆಂಜೂರಿನ ಸಮೀಪದ ಕರ‍್ಜೆ ಎಂಬಲ್ಲಿ ದೊರಕಿದ ಆಳುಪ ರಾಣಿ ಬಲ್ಲಮಹಾದೇವಿಗೆ ಸಂಬಂದಿಸಿದ ಕಲ್ಬರಹದಲ್ಲಿ ಕಂಬಳದ ಬಗ್ಗೆ ಹೇಳಲಾಗಿದೆ. “ಸುಗ್ಗಡಿಯ ಕಂಬಳಕ್ಕೆ ಎರಡು ಎತ್ತು ಕರೆತರಬಹುದು” ಎಂದು ಇದರಲ್ಲಿ ಹೇಳಲಾಗಿದೆ.

1) ಇದರ ಕಾಲ ಕ್ರಿ. ಶ.1200 (ಶಕ ವರುಶ 1281). ಕಂಬಳ ಆಚರಣೆಯು ಸುಗ್ಗಿ ಬೆಳೆಯ ಬಿತ್ತನೆಯ ಸಮಯದಲ್ಲಿ ನಡೆಯುತ್ತದೆ. ಕುಂದಾಪುರ ಕನ್ನಡದಲ್ಲಿ ಸುಗ್ಗಿ ಅಗೇಡಿ ಎಂದರೆ ಸುಗ್ಗಿಯ ನೇಜಿ ಬಿತ್ತುವ ಜಾಗ. ಸುಗ್ಗಿ ಅಗೇಡಿ > ಸುಗ್ಗೇಡಿ > ಸುಗ್ಗಾಡಿ ಎಂದು ಪ್ರಯೋಗವಾಗಿರಬಹುದು ಎಂದು ತಿಳಿವಿಗರು ಅಬಿಪ್ರಾಯಪಟ್ಟಿದ್ದಾರೆ. ಕ್ರಿ. ಶ. ಹನ್ನೆರಡನೆಯ ನೂರೇಡಿನಲ್ಲಿಯೇ ಸುಗ್ಗಿಯ ಕಾಲದಲ್ಲಿ ಕಂಬಳ ನಡೆಯುತ್ತಿದ್ದದನ್ನು ಕಲ್ಬರಹದ ಹೇಳಿಕೆ ತಿಳಿಸುತ್ತದೆ. ಇದರಿಂದ ಕಂಬಳ ಕನಿಶ್ಟ ಎಂಟುನೂರು ವರುಶಗಳಿಂದ ಆಚರಿಸಲ್ಪಡುತ್ತಾ ಬಂದಿದೆ ಎಂದು ಸ್ಪಶ್ಟವಾಗುತ್ತದೆ. ಕ್ರಿ. ಶ.1402ರ ಬಾರಕೂರು ಕಲ್ಬರಹದಲ್ಲಿ ‘ಆ ಗದ್ದೆಯ ಕೆಳಗಿನ ಕಂಬಳ ಬಗ್ಗೆ’ ಎಂದು ಹೇಳಲಾಗಿದೆ.

2) ಕ್ರಿ. ಶ. 1421ರ ಬಾರಕೂರು ಕಲ್ಬರಹದಲ್ಲಿ “ದೇವರು ಸಾವಂತನ ಕಂಬಳ ಗದ್ದೆಯ ಮೇಲೆ” ಎಂದು ಕಂಬಳಗದ್ದೆಯನ್ನು ಹೇಳಲಾಗಿದೆ.

3) ಕ್ರಿ. ಶ. 1424ರ ಬಾರಕೂರು ಕಲ್ಬರಹದಲ್ಲಿ “ಹೊತ್ತಾಗಿ ಮಾಡಿದ ಕಂಬಳ ಗದ್ದೆ” ಎಂದಿದೆ.

4) ಕ್ರಿ. ಶ. 1437ರ ಉಡುಪಿ ಕಲ್ಬರಹವು “ಮೂಲವಾಗಿ ಕೊಡಬಾಳು ಕಂಬಳ ಗದ್ದೆ ಕೊಯಿಲ್ ಹದಿನಾರು” ಎಂದಿದೆ.

5) ಕ್ರಿ. ಶ. 1482ರ ಕೊಲ್ಲೂರು ಕಲ್ಬರಹದಲ್ಲಿ “ಅವರಿಗೆ ಒಬ್ಬ ಬಾಳು ಕಂಬಳ ಗದ್ದೆ” ಎಂದು ಹೇಳಲಾಗಿದೆ.

6) ಕ್ರಿ. ಶ. 1521ರ ಬಾರಕೂರು ಕಲ್ಬರಹದಲ್ಲಿ ಕಂಬಳ ಗದ್ದೆಯಲಿ ನಡುಹುಣಿ” ಎಂದು ಹೇಳಲಾಗಿದೆ.

7) ಕ್ರಿ. ಶ. 1676ರ ಸುಬ್ರಹ್ಮಣ್ಯದ ಕಲ್ಲುಮಾಣೆರು ಶಂಕರದೇವಿ ಬಲ್ಲಾಳ್ತಿಯ ಹೆಸರಿನಲ್ಲಿರುವ ಕಲ್ಬರಹದಲ್ಲಿ “ನನ್ನ ಕಂಬಲ ಗದ್ದೆಯಿಂದ ನಡೆಸಬಹುದು” ಎಂಬಲ್ಲಿ ಕಂಬಳಗದ್ದೆಯ ಬಗ್ಗೆ ಹೇಳಲಾಗಿದೆ.
Credit: Tulunad State- Facebook Page.

No comments:

Post a Comment